March 29, 2026
WhatsApp Image 2026-03-16 at 1.57.16 PM

ರಾಯಬಾಗ: ತಾಲ್ಲೂಕಿನ ಮಂಟೂರ ಗ್ರಾಮ♥

ರಾಯಬಾಗ: ತಾಲ್ಲೂಕಿನ ಮಂಟೂರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆದಿದ್ದು, ಅಧ್ಯಕ್ಷರಾಗಿ ಉದಯ ಬುರ್ಜಿ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಮೇಘಾಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಮೂಲಕ ಮಂಟೂರ ಗ್ರಾಮ ಪಂಚಾಯಿತಿ ಆಡಳಿತ ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಹೋಗಿದೆ. ಆಯ್ಕೆ ಪ್ರಕ್ರಿಯೆ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಬುರ್ಜಿ ಮಾತನಾಡಿ, ಗ್ರಾಮಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಹಾಗೂ ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ತಿಳಿಸಿದರು. ಉಪಾಧ್ಯಕ್ಷೆ ಶೋಭಾ ಮೇಘಾಡೆ ಕೂಡ ಗ್ರಾಮಾಭಿವೃದ್ಧಿಗೆ ಎಲ್ಲ ಸದಸ್ಯರ ಸಹಕಾರದೊಂದಿಗೆ ಕೆಲಸ ಮಾಡುವುದಾಗಿ ಹೇಳಿದರು.
ಗ್ರಾಮದ ಅಭಿವೃದ್ಧಿಗೆ ಎಲ್ಲ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮುಖಂಡರು ಈ ಸಂದರ್ಭದಲ್ಲಿ ಆಶಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555