“ನಮ್ಮನಡೆ ಸುದ್ದಿಕಡೆ” 17-03-2026
2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ಇದೇ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ (Exam) ಸಜ್ಜಾಗುತ್ತಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್‌ಆರ್‌ಟಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣದ (Bus Travel) ಸೌಲಭ್ಯವನ್ನು ಘೋಷಿಸಿದೆ.
ಬೆಂಗಳೂರು, (ಮಾರ್ಚ್ 16): ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ (SSLC Exams) ದಿನಗಣನೆ ಆರಂಭವಾಗಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ (KSRTC) ಉಚಿತ ಪ್ರಯಾಣ ಘೋಷಿಸಿದೆ. ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣದ (Bus Travel) ಸೌಲಭ್ಯವನ್ನು ಘೋಷಿಸಿದೆ. ಹೌದು.. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಕೆಎಸ್ ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಹಾಲ್ ಟಿಕೆಟ್ (ಪ್ರವೇಶ ಪತ್ರ) ಮತ್ತು ಅಗತ್ಯ ದಾಖಲೆಗಳನ್ನು ಜೊತೆಯಲ್ಲಿ ತರಬೇಕು ಎಂದು ಮಂಡಳಿ ಸೂಚಿಸಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ
ಮಾರ್ಚ್ 18 – ಪ್ರಥಮ ಭಾಷೆ
ಮಾರ್ಚ್ 23 – ವಿಜ್ಞಾನ
ಮಾರ್ಚ್ 25 – ದ್ವಿತೀಯ ಭಾಷೆ
ಮಾರ್ಚ್ 28 – ಗಣಿತ
ಮಾರ್ಚ್ 30 – ತೃತೀಯ ಭಾಷೆ
ಏಪ್ರಿಲ್ 2 – ಸಮಾಜ ವಿಜ್ಞಾನ
ಯಾವೆಲ್ಲಾ ವಸ್ತುಗಳಿಗೆ ನಿಷೇಧ?
• ಮೊಬೈಲ್ ಫೋನ್‌ಗಳು
• ಸ್ಮಾರ್ಟ್ ವಾಚ್‌ಗಳು
• ಬ್ಲೂಟೂತ್ ಸಾಧನಗಳು, ಇಯರ್‌ಫೋನ್‌ಗಳು
• ಕ್ಯಾಲ್ಕುಲೇಟರ್‌ಗಳು (ವಿಶೇಷವಾಗಿ ಅನುಮತಿ ನೀಡಿದಲ್ಲಿ ಮಾತ್ರ)
• ನೋಟ್ಸ್ ಅಥವಾ ಚೀಟಿಗಳು
• ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು
• ಈ ಮೇಲಿನ ನಿಯಮಗಳನ್ನು ಉಲ್ಲಂಘಿಸಿದರೆ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆಗಳು
• ಪರೀಕ್ಷಾ ಕೇಂದ್ರಕ್ಕೆ ಕನಿಷ್ಠ 30 ನಿಮಿಷ ಮುಂಚಿತವಾಗಿ ತಲುಪಬೇಕು.
• ನಿಗದಿಪಡಿಸಿದ ಆಸನದಲ್ಲಿ ಕುಳಿತುಕೊಳ್ಳಬೇಕು.
• ಉತ್ತರ ಪತ್ರಿಕೆಯ ಮೇಲೆ ನೋಂದಣಿ ಸಂಖ್ಯೆ ಮತ್ತು ವಿಷಯದ ಕೋಡ್ ಅನ್ನು ಎಚ್ಚರಿಕೆಯಿಂದ ಬರೆಯಬೇಕು.
