March 29, 2026
20260324_210703

ಬೆಳಗಾವಿ

ಬೆಳಗಾವಿ ಜಿಲ್ಲೆಯಲ್ಲಿ ಸದ್ಯಕ್ಕೆ ಪೆಟ್ರೋಲ್‌ ಮತ್ತು ಡೀಸೆಲ್‌ನ ಯಾವುದೇ ಕೊರತೆಯಿಲ್ಲ ಎಂಬ ಬಗ್ಗೆ ಮಾಧ್ಯಮ ಪ್ರತಿನಿಧಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ

ಜಿಲ್ಲಾಧಿಕಾರಿಗಳು ಮಾತನಾಡಿದರು. ತೈಲ ಅಭಾವದ ವದಂತಿಗಳಿಂದಾಗಿ ಜನರು ಪೆಟ್ರೋಲ್ ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜಿಲ್ಲೆಯಲ್ಲಿ ಸಾಕಷ್ಟು ತೈಲ ದಾಸ್ತಾನು ಲಭ್ಯವಿದೆ ಎಂದು ಸ್ಪಷ್ಟಪಡಿಸಿದರು.

ಜನರು ಗಾಬರಿಯಾಗುವ ಅಗತ್ಯವಿಲ್ಲ ಮತ್ತು ಅಗತ್ಯಕ್ಕಿಂತ ಹೆಚ್ಚು ಸಂಗ್ರಹಿಸಿಟ್ಟುಕೊಳ್ಳಬೇಡಿ ಎಂದು ಮನವಿ ಮಾಡಿ, ಜಿಲ್ಲೆಯ ಎಲ್ಲಾ ಪೆಟ್ರೋಲ್ ಬಂಕ್‌ಗಳಿಗೆ ನಿರಂತರವಾಗಿ ಇಂಧನ ಸರಬರಾಜು ಮಾಡಲಾಗುತ್ತಿದೆ. ವದಂತಿಗಳಿಗೆ ಕಿವಿಗೊಡದೆ ಜಿಲ್ಲಾಡಳಿತ ಜತೆ ಸಹಕರಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳು ವಿನಂತಿಸಿದ್ದಾರೆ.

ಪಟ್ರೋಲ್ ಕೊರತೆ ವದಂತಿ…..ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರಿಂದ ತುರ್ತು ಪತ್ರಿಕಾಗೋಷ್ಠಿ.

• ವದಂತಿ ಹರಡಿದರೆ ಕಾನೂನು ಕ್ರಮ-ಎಚ್ಚರಿಕೆ

• ಜಿಲ್ಲೆಯಲ್ಲಿ ಸಿಲಿಂಡರ್, ಇಂಧನ ಕೊರತೆ ಇಲ್ಲ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್.

• ಎಚ್ಚರ ಎಚ್ಚರ ಎಚ್ಚರ ಯಾರಾದರೂ ಸುಳ್ಳು ಸುದ್ದಿ ಪ್ರಚಾರದ ಮಾಡಬಾರದು.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555