March 29, 2026
WhatsApp Image 2026-03-26 at 11.33.54 AM

ರಾಯಬಾಗ ತಾಲೂಕಿನ ಮೇಖಳಿ ಗ್ರಾಮ

ಬ್ರೇಕಿಂಗ್ ನ್ಯೂಸ್…
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಶಾಲೆ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಸಹೋದರಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ಜಯಶ್ರೀ ಕೊಟ್ರೆ  ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಸಹೋದರಿ ಭಾಗ್ಯಶ್ರೀ ಕೊಟ್ರೆ ಅವರನ್ನು ತಕ್ಷಣವೇ ಬೆಳಗಾವಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನೆ ಮಾಡಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇವರು ರಾಯಬಾಗ ತಾಲೂಕಿನ ಮೇಖಳಿ ಅನುದಾನಿತ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಎಂದು ತಿಳಿದುಬಂದಿದೆ.
ನಾಗರಮುನ್ನೋಳಿ ಗ್ರಾಮದಿಂದ ರಾಯಬಾಗ ಪಟ್ಟಣದ ಕಡೆಗೆ ತೆರಳುತ್ತಿದ್ದ ಕಾರು ಈ ಅಪಘಾತಕ್ಕೆ ಕಾರಣವಾಗಿರುವುದಾಗಿ ಪ್ರಾಥಮಿಕ ಮಾಹಿತಿಗಳು ಸೂಚಿಸುತ್ತಿವೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಸರಗಿ ಹಾಗೂ ರಾಯಬಾಗ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555