May 30, 2026
WhatsApp Image 2026-04-04 at 11.01.14 AM

ರಾಯಬಾಗ

“ವಿಶ್ವಚೇತನ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ – 2026 ”

• ರಾಯಬಾಗ: ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ.ಇಂದಿನ ವಿದ್ಯಾರ್ಥಿಗಳೇ ನಾಳೆಯ ದೇಶದ ನಾಯಕರು, ವಿಜ್ಞಾನಿಗಳು, ಶಿಕ್ಷಕರು ಮತ್ತು ಸಮಾಜ ಪರಿವರ್ತಕರಾಗಿರುವುದರಿಂದ ಅವರು ತಮ್ಮ ವಿದ್ಯಾಭ್ಯಾಸದ ಜೊತೆಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ” ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವಾಧ್ಯಕ್ಷರಾದ ಶಶಿಕಾಂತ ಗುರೂಜಿ”  ಮಾತನಾಡಿದರು.

• ಪಟ್ಟಣದಲ್ಲಿ ಗುರುವಾರ ನಡೆದ ವಿಶ್ವಚೇತನ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

• ವಿದ್ಯಾರ್ಥಿಗಳು ಕೇವಲ ಪಾಠಪುಸ್ತಕಗಳಲ್ಲೇ ಸೀಮಿತವಾಗದೆ ಸಮಾಜದ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಅವುಗಳಿಗೆ ಪರಿಹಾರ ಕಂಡುಹಿಡಿಯುವ ದಿಸೆಯಲ್ಲಿ ಯೋಚಿಸಬೇಕು. ಶಿಸ್ತಿನ ಜೀವನ, ಪರಿಶ್ರಮ, ಮತ್ತು ದೇಶಭಕ್ತಿ ಎಂಬ ಮೌಲ್ಯಗಳನ್ನು ಅಳವಡಿಸಿಕೊಂಡರೆ ಮಾತ್ರ ಉತ್ತಮ ನಾಗರಿಕರಾಗಿ ಬೆಳೆದು ದೇಶದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಲು ಸಾಧ್ಯ ಎಂದು ಅವರು ತಿಳಿಸಿದರು.

ಬೆಳಗಾವಿ ಆರ್ ಎಲ್ ಎಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಶಿವಾನಂದ ಬುಲಬುಲಿ ಮಾತನಾಡಿ,ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಿಕೊಂಡು ಅದಕ್ಕಾಗಿ ನಿರಂತರ ಪ್ರಯತ್ನ ಮಾಡಬೇಕು. ಪಾಠಪುಸ್ತಕಗಳ ಜ್ಞಾನಕ್ಕೆ ಮಾತ್ರ ಸೀಮಿತವಾಗದೇ ಸಾಮಾನ್ಯ ಜ್ಞಾನ, ನೈತಿಕ ಮೌಲ್ಯಗಳು ಮತ್ತು ಸಮಾಜದ ಅರಿವು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಅದೇ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ದುರುಪಯೋಗದಿಂದ ದೂರವಿರಬೇಕು ಎಂದು ಎಚ್ಚರಿಸಿದರು.

• ಈ ಸಮಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು, ಸೈನಿಕರನ್ನು, ಶಾಲಾ ಸಿಬ್ಬಂದಿಗಳನ್ನು ಸತ್ಕರಿಸಲಾಯಿತು. ಕ್ಷೇತ್ರ ಸಮನ್ವಯಾಧಿಕಾರಿ ಬಸವರಾಜ ಕಾಂಬಳೆ ,ಸಮೂಹ ಸಂಪನ್ಮೂಲ ಅಧಿಕಾರಿ ಅನಿಲ ಸುತಾರ, ಶಿಕ್ಷಕಿ ರೂಪಾ ತುರಾಯಿದಾರ, ವಾಸೀಮ್ ಅಕ್ರಂ ಮುಲ್ಲಾ ಮಾತನಾಡಿದರು. ರಮೇಶ ಕುಲಕರ್ಣಿ, ರಾಜು ಹಿಪ್ಪರಗಿ, ನೆಹರು ಮಗದುಮ್ಮ,ಯುವರಾಜ ಮಾನೆ,ಸಂತೋಷ ಪಾಟೀಲ, ಚೈತನ ನಾಯಿಕ, ವಿದ್ಯಾ ನಾಯಿಕ, ಬಾದಶಾ ಡಾಂಗೆ, ಸಂದೀಪ ವಂಟಮೂರೆ, ಪುಟ್ಟು ಅವಳೆ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555