ಬೆಳಗಾವಿ
ಮಾರ್ಚ್ 3ರಂದು ಬೆಳಗಾವಿಯ ಟಿಳಕವಾಡಿ ಪ್ರದೇಶದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಬೆಡ್ ರೂಮಿನಲ್ಲಿ ಲಾಕ್ ಮಾಡಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೆಹಲಿಯಿಂದ ಫೋನ್ ಕರೆ ಮೂಲಕ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ಬಂದಿತ್ತು.
ಬೆಳಗಾವಿ: ತನ್ನ ಪತ್ನಿ ಮತ್ತು ಮಕ್ಕಳನ್ನು ಮನೆಯಲ್ಲೇ ಕೂಡಿ ಹಾಕಿ ಚಿತ್ರಹಿಂಸೆ ನೀಡುತ್ತಿದ್ದ ಪ್ರಕರಣದಲ್ಲಿ ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತಾಯಿ ಮತ್ತು ಮಕ್ಕಳನ್ನು ರಕ್ಷಣೆ ಮಾಡುವಲ್ಲಿ ಬೆಳಗಾವಿಯ ಅಕ್ಕಾ ಪಡೆ ಯಶಸ್ವಿಯಾಗಿದೆ.
ಮಾರ್ಚ್ 3ರಂದು ಬೆಳಗಾವಿಯ ಟಿಳಕವಾಡಿ ಪ್ರದೇಶದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಬೆಡ್ ರೂಮಿನಲ್ಲಿ ಲಾಕ್ ಮಾಡಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೆಹಲಿಯಿಂದ ಫೋನ್ ಕರೆ ಮೂಲಕ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ಬಂದಿತ್ತು.
ಬಳಿಕ ಇಲ್ಲಿನ ಸಿಪಿಐ ಡಿ.ಪಿ.ನಿಂಬಾಳ್ಳರ್ ಅವರು ಅಕ್ಕಾಪಡೆಗೆ ಈ ಕುರಿತು ಮಾಹಿತಿ ರವಾನಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಅಕ್ಕಾಪಡೆ ಕರ್ತವ್ಯದಲ್ಲಿದ್ದ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಮನೆ ಬಾಗಿಲು ತೆಗೆಸಿ, ಮಹಿಳೆ ಮತ್ತು ಅವರ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ. ಅಗತ್ಯ ವೈದ್ಯಕೀಯ ಚಿಕಿತ್ಸೆ ಕೊಡಿಸಿ ಧೈರ್ಯ ತುಂಬಿದ್ದಾರೆ. ಇದೀಗ ಸಂತ್ರಸ್ತ ಮಹಿಳೆಯ ದೂರಿನ ಮೇರೆಗೆ ಪತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಮಹಿಳೆಯ ಇಚ್ಛೆ ಮತ್ತು ಮುಂದಿನ ಸುರಕ್ಷತೆಯ ದೃಷ್ಟಿಯಿಂದ ಮಹಿಳೆ ಮತ್ತು ಅವರ ಇಬ್ಬರು ಮಕ್ಕಳನ್ನು ಅವರ ತವರು ಮನೆ ಇರುವ ದೆಹಲಿಗೆ ವಿಮಾನದ ಮೂಲಕ ಕಳುಹಿಸಿಕೊಡುವ ಮೂಲಕ ಪೊಲೀಸರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಈ ಕಾರ್ಯಾಚರಣೆಯನ್ನು ಪಿಎಸ್‌ಐ ಎ ರುಕ್ಕಿಣಿ, ಸಿಬ್ಬಂದಿಗಳಾದ ಆರ್ ಐ ಕಡಲಗಿ, ಸ್ವಪ್ನಾ ಗೊಂದಳಿ, ರೂಪಶ್ರೀ ಯಮಕನಮರಡಿ ಮತ್ತು ಸಿದ್ದಪ್ಪ ಸಾಂಗ್ಲಿ ಅವರೊಂದಿಗೆ ನಡೆಸಲಾಗಿದ್ದು, ಅವರ ಪ್ರಯತ್ನಗಳು ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗುತ್ತಿವೆ.
