ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮ
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಆಟೋ ಚಾಲಕನ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
• ಮೃತನನ್ನು ಅಶೋಕ ವಡ್ಡರ (27) ಎಂದು ಗುರುತಿಸಲಾಗಿದ್ದು, ಆಟೋ ನಂಬರ್ ಹಾಕುವ ವಿಚಾರಕ್ಕೆ ಉಂಟಾದ ಗಲಾಟೆಯೇ ಕೊಲೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
• ಆರೋಪಿಗಳಾದ ಶಿವಾ ವಡ್ಡರ್, ಸಾಗರ ವಡ್ಡರ್ ಹಾಗೂ ವಿನೋದ ವಡ್ಡರ್ ಅವರು ಅಶೋಕನ ತಲೆಗೆ ಬಲವಾಗಿ ಹೊಡೆದು ಕೊಲೆ ನಡೆಸಿದ್ದಾರೆ. ಬಳಿಕ ಘಟನೆ ಮರೆಮಾಚಲು ಗಲಾಟೆ ನಡೆದಿದೆ ಎಂದು ನಾಟಕವಾಡಿ ತಾವೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
• ಆದರೆ ಆರೋಪಿಗಳ ವರ್ತನೆ ಅನುಮಾನಾಸ್ಪದವಾಗಿ ಕಂಡ ಹಿನ್ನೆಲೆಯಲ್ಲಿ ಪೊಲೀಸರು ಕಠಿಣವಾಗಿ ವಿಚಾರಣೆ ನಡೆಸಿದಾಗ ಸತ್ಯ ಬಹಿರಂಗವಾಗಿದೆ.ವಿಚಾರಣೆ ವೇಳೆ ಆರೋಪಿಗಳು ತಪ್ರೊಪ್ಪಿಕೊಂಡಿದ್ದಾರೆ.
• ಈ ಹಿನ್ನೆಲೆಯಲ್ಲಿ ಮೂವರನ್ನೂ ಬಂಧಿಸಿದ ಪೊಲೀಸರು ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
