May 30, 2026
WhatsApp Image 2026-04-09 at 10.33.25 AM

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ

•  ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನಲ್ಲಿ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಕೇಳಿ ಪ್ರಿಯಕರ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ.

•  ಮೃತ ಪ್ರೇಮಿಗಳನ್ನು ಬನಹಟ್ಟಿಯ ಕೆಹೆಚ್‌ಡಿಸಿ ಕಾಲೋನಿಯ  ಪವಿತ್ರಾ ಒಂಟಿ  (19) ಹಾಗೂ ಅಸ್ಕಿ ಗ್ರಾಮದ  ಕಾರ್ತಿಕ್ ನಾಯಕ್  (19) ಎಂದು ಗುರುತಿಸಲಾಗಿದೆ. ಮಂಗಳವಾರ ಇವರಿಬ್ಬರ ನಡುವೆ ಯಾವುದೋ ವಿಷಯಕ್ಕೆ ಜಗಳ ನಡೆದಿತ್ತು ಎಂದು ತಿಳಿದುಬಂದಿದೆ.

•  ಇದರಿಂದ ಬೇಸತ್ತ ಪವಿತ್ರಾ ಮೊದಲು ಬನಹಟ್ಟಿಯ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪವಿತ್ರಾ ಸಾವನ್ನಪ್ಪಿದ ವಿಷಯ ತಿಳಿದ ಕಾರ್ತಿಕ್ ತೀವ್ರ ಆಘಾತಕ್ಕೊಳಗಾಗಿದ್ದಾನೆ.

•  ಅಲ್ಲದೇ ತೀವ್ರ ಮನನೊಂದು ತಾನೂ ಕೂಡ ಬದುಕಿರಬಾರದೆಂದು ನಿರ್ಧರಿಸಿ, ಅಸ್ಕಿ ಗ್ರಾಮದಲ್ಲಿ ನೇಣಿಗೆ ಶರಣಾಗಿದ್ದಾನೆ. ಇಬ್ಬರೂ ತಾರುಣ್ಯದಲ್ಲೇ ಬದುಕು ಕೊನೆಗೊಳಿಸಿರುವುದು ಎರಡೂ ಕುಟುಂಬಗಳಲ್ಲಿ ಶೋಕ ಮಡುಗಟ್ಟುವಂತೆ ಮಾಡಿದೆ.

• ಸದ್ಯ ವಿಷಯ ತಿಳಿಯುತ್ತಿದ್ದಂತೆಯೇ ಬನಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555