May 30, 2026
WhatsApp Image 2026-04-15 at 11.44.00 AM

ವಿಜಯಪುರ

• ಅಲಿಯಬಾದ್ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗೊಡಂದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರೆ (48) ದುಷ್ಕರ್ಮಿಗಳಿಂದ ಹತ್ಯೆಯಾದವರು. ಕೊಲೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

• ವಿಜಯಪುರ: ರಿಯಲ್ ಎಸ್ಟೇಟ್ ಉದ್ಯಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಲಿಸುತ್ತಿದ್ದ ಜೀಪಿಗೆ ಟಿಪ್ಪರ್ ಡಿಕ್ಕಿ ಹೊಡೆಸಿ, ಬಳಿಕ ಗುಂಡು ಹೊಡೆದು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ನಗರ ಹೊರ ವಲಯದ ಅಲಿಯಾಬಾದ್‌ನಲ್ಲಿ ಮಂಗಳವಾರ ನಡೆದಿದೆ.

• ಅಲಿಯಬಾದ್ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗೊಡಂದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರೆ (48) ದುಷ್ಕರ್ಮಿಗಳಿಂದ ಹತ್ಯೆಯಾದವರು. ಕೊಲೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

• ಟಿಪ್ಪರ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮೊದಲು ಥಾರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ಟಿಪ್ಪರ್‌ನಿಂದ ಇಳಿದ ಆರೋಪಿಗಳು ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಕಾರ್ ಡೋರ್ ಓಪನ್ ಆಗದಿದ್ದಕ್ಕೆ ಕಲ್ಲು ಎತ್ತಿ ಹಾಕಿದ್ದಾರೆ. ರಾಜು ಖರೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

• ರಾಜು ಖರೆ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಜೊತೆಗೆ ದ್ರಾಕ್ಷಿ ಕೃಷಿಕರಾಗಿದ್ದರು. ಕೌಟುಂಬಿಕ ಆಸ್ತಿ ವಿವಾದ ಇತ್ತು ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದರ ಕುರಿತು ತನಿಖೆಯಿಂದ ತಿಳಿಯಬೇಕಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555