• ಯಾದಗಿರಿ: ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
• ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.
• ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
• ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.
• ಅಪಘಾತದಲ್ಲಿ ಮೃತಪಟ್ಟವರನ್ನು ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಂದು ಅಮವಾಸ್ಯೆ ಹಿನ್ನೆಲೆ ತಿಂತನಿಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಕಾರಲ್ಲಿದ್ದ ಸರ್ಕಾರಿ ನೌಕರ ಶರಣಪ್ಪ, ಪುರಸಭೆ ಸದಸ್ಯ ಮಲ್ಲಿಕಾರ್ಜುನ್, ಮೂವರು ಮಹಿಳೆಯರು ಸೇರಿ 6 ಮಂದಿ ಮೃತಪಟ್ಟಿದ್ದಾರೆ.