ಬೆಂಗಳೂರು
ಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು Congress ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ.
ಬೆಂಗಳೂರು: ಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು Congress ಶಾಸಕ ವಿನಯ್ ಕುಲಕರ್ಣಿಗೆ ಜೀವಾವಾಧಿ ಶಿಕ್ಷೆ ನೀಡಿದೆ. ಇದೇ ಪ್ರಕರಣದಲ್ಲಿ 15 ಅಪರಾಧಿಗಳಿಗೂ ಜೀವಾವಾಧಿ ಶಿಕ್ಷೆ ವಿಧಿಸಿರುವ ಕೋರ್ಟ್ 19ನೇ ಅಪರಾಧಿ ಚೆನ್ನಕೇಶವ ಟಿಂಗರಿಕರ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ನ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಇದೇ ವೇಳೆ ಯೋಗೇಶ್ ಗೌಡ ಮಕ್ಕಳಿಗೆ ಪರಿಹಾರವಾಗಿ 16 ಲಕ್ಷ ರೂಪಾಯಿ ನೀಡುವಂತೆ ವಿನಯ್ ಕುಲಕರ್ಣಿಗೆ ಸೂಚಿಸಿದ್ದಾರೆ.
