May 30, 2026
WhatsApp Image 2026-04-18 at 3.22.18 PM

ಬೆಂಗಳೂರು

 

ಬೆಂಗಳೂರು: ನಾವು ಇಂದು ಕೃತಕ ಬುದ್ಧಿಮತ್ತೆಯ ಕಾಲಘಟ್ಟಕ್ಕೆ ಅಡಿಯಿಟ್ಟಿದ್ದೇವೆ. ಕೃತಕ ಬುದ್ಧಿಮತ್ತೆಯ ತಾಂಬೆಂಗಳೂರು: ರಾಜ್ಯದ ಉಚ್ಚ ನ್ಯಾಯಾಲಯಕ್ಕೆ ಪ್ರವೇಶವನ್ನು ಸುಧಾರಿಸಬೇಕೆನ್ನುವ ಬಲವಾದ ಅಗತ್ಯವಿದೆ. ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

• ನ್ಯಾಯಾಂಗ ಕ್ಷೇತ್ರಕ್ಕೆ ಕೃತಕ ಬುದ್ಧಿಮತ್ತೆಯ ಪ್ರವೇಶವಾಗಿದೆ. ಅದರಿಂದಾಗಿಆಡಳಿತ, ಹಕ್ಕುಗಳು ಮತ್ತು ನ್ಯಾಯದ ಸ್ವರೂಪವನ್ನು ರೂಪಿಸುವ ಪರಸ್ಪರ ಸಂಬಂಧ ಹೊಂದಿರುವ ಶಕ್ತಿಗಳ ನಡುವೆ ನಿರ್ಣಾಯಕ ಹಂತದಲ್ಲಿ ನಾವು ಇಂದು ನಿಂತಿದ್ದೇವೆ.

•  ಬೆಂಗಳೂರಿನ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ 22ನೇ ದ್ವೈವಾರ್ಷಿಕ ರಾಜಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರಸಕ್ತ ಕಾಲಘಟ್ಟದಲ್ಲಿ ಕಾನೂನು ಮತ್ತು ತಂತ್ರಜ್ಞಾನವು ಪ್ರತ್ಯೇಕ ಕ್ಷೇತ್ರಗಳಾಗಿ ಉಳಿದಿಲ್ಲ. ಈಗ ಮುಂದುವರೆದು ನ್ಯಾಯಾಂಗ ಕ್ಷೇತ್ರಕ್ಕೆ ಕೃತಕ ಬುದ್ಧಿಮತ್ತೆಯ ಪ್ರವೇಶವಾಗಿದೆ. ಅದರಿಂದಾಗಿ

•  ಆಡಳಿತ, ಹಕ್ಕುಗಳು ಮತ್ತು ನ್ಯಾಯದ ಸ್ವರೂಪವನ್ನು ರೂಪಿಸುವ ಪರಸ್ಪರ ಸಂಬಂಧ ಹೊಂದಿರುವ ಶಕ್ತಿಗಳ ನಡುವೆ ನಿರ್ಣಾಯಕ ಹಂತದಲ್ಲಿ ನಾವು ಇಂದು ನಿಂತಿದ್ದೇವೆ. ಈ ಪಯಣದಲ್ಲಿ ನ್ಯಾಯಾಂಗಕ್ಕೆ ಅದರ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ಗೌರವಿಸುತ್ತಲೇ ಅದಕ್ಕೆ ಬೆಂಬಲ ನೀಡುವುದು, ಸಕ್ರಿಯಗೊಳಿಸುವುದು ಮತ್ತು ಬಲಪಡಿಸುವುದು ಆಡಳಿತದ ಪಾತ್ರ. ನ್ಯಾಯಾಂಗ ಮೂಲಭೂತ ಸೌಕರ್ಯ, ಡಿಜಿಟಲ್ ಪರಿವರ್ತನೆ, ನಾವೀನ್ಯತೆ ಹಾಗೂ ನ್ಯಾಯದಾನವು ಒಟ್ಟಾಗಿ ಪ್ರಗತಿ ಹೊಂದಲು ಸೂಕ್ತವಾದ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸಲು ಕರ್ನಾಟಕ ಸರ್ಕಾರವು ಬದ್ಧವಾಗಿದೆ.

•  ನ್ಯಾಯದಾನ ವ್ಯವಸ್ಥೆಗೆ ವೇಗ ಮತ್ತು ಪ್ರವೇಶವನ್ನು ಒದಗಿಸಲು ಕರ್ನಾಟಕದಲ್ಲಿ ನಾವು ಖಚಿತ ಸುಧಾರಣೆಗಳನ್ನು ಕೈಗೊಂಡಿದ್ದೇವೆ. ಕಾಲಬದ್ಧ ಪ್ರಕರಣ ನಿರ್ವಹಣೆ, ಸರಹದ್ದುಗಳ ಪುನರ್ ರಚನೆಯ ಮೂಲಕ ಉಚ್ಚ ನ್ಯಾಯಾಲಯಗಳ ಹೊರೆಯನ್ನು ತಗ್ಗಿಸುವುದುಹಾಗೂ ಸರ್ಕಾರಿ ವ್ಯಾಜ್ಯ ಅಭ್ಯಾಸಗಳನ್ನು ಬಲಪಡಿಸಲಾಗುತ್ತಿದೆ ಎಂದಿದ್ದಾರೆ.

 

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555