May 30, 2026
WhatsApp Image 2026-04-21 at 11.57.45 AM

ವಿಜಯಪುರ

ನಿನ್ನೆ ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿಕೊಂಡು JCB ಪಕ್ಷ ಸ್ಥಾಪನೆ ಮಾಡುತ್ತೇನೆ. ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದು ಹೇಳಿದರು.
Basana Gowda Patil Yatnal
• ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೀರನಗಡ್ಡಿ ಗ್ರಾಮದಲ್ಲಿ ನಿರ್ಮಾಣವಾದ ಜಗಜ್ಯೋತಿ ಶ್ರೀ ಬಸವೇಶ್ವರ ಅಶ್ವಾರೂಢ ಕಂಚಿನ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿಕೊಂಡು ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

• ನಿನ್ನೆ ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿಕೊಂಡು JCB ಪಕ್ಷ ಸ್ಥಾಪನೆ ಮಾಡುತ್ತೇನೆ. ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದು ಹೇಳಿದರು.

• ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಒಳ್ಳೆಯ ಮುಹೂರ್ತ ನೋಡಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.

• ಮೊದಲು ಜಿಲ್ಲಾ ಕೇಂದ್ರ ನಂತರ ತಾಲೂಕು ಕೇಂದ್ರಗಳಿಗೆ ಹೋಗುತ್ತೇನೆ. ಹಿಂದೂಪರ ಚಿಂತನೆ ಉಳ್ಳ ನಿರುದ್ಯೋಗಿ ಯುವಕರನ್ನು, ಅಭಿವೃದ್ಧಿ ಚಿಂತನೆ ಪರ ಇರುವ ಜನರ ಸಭೆ ಮಾಡುತ್ತೇನೆ. ಜನರ ಅಭಿಪ್ರಾಯ ಪಡೆದು ಮುಂದೆ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡುತ್ತೇನೆ. ಚುನಾವಣೆ ಆಯೋಗ ನನ್ನ ಪಕ್ಷಕ್ಕೆ ಯಾವ ಗುರುತು ನೀಡುತ್ತದೆ ಎಂದು ನೋಡಬೇಕಿದೆ ಎಂದರು.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555