May 30, 2026
WhatsApp Image 2026-04-24 at 2.38.32 PM

ಬೆಂಗಳೂರು

 

ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಮೂಲಕ ಅಥವಾ ಆಯಾ ಶಾಲಾ ಲಾಗಿನ್ ಬಳಸಿ ನಾಳೆಯಿಂದ ಅಂಕಗಳನ್ನು ಪರಿಶೀಲಿಸಬಹುದಾಗಿದೆ. ಫಲಿತಾಂಶದ ವಿಳಂಬದಿಂದ ವಿದ್ಯಾರ್ಥಿಗಳ ಮುಂದಿನ ವ್ಯಾಸಂಗಕ್ಕೆ ಯಾವುದೇ ತೊಂದರೆಯಾಗದಂತೆ ಇಲಾಖೆ ಎಚ್ಚರಿಕೆ ವಹಿಸಿದೆ ಎಂದು ಭರವಸೆ ನೀಡಿದರು ಮಧು ಬಂಗಾರಪ್ಪ.

ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಲ್ಲಿ ತೃತೀಯ ಭಾಷೆಯ ಅಂಕಗಳ ಕುರಿತಾಗಿ ಉಂಟಾಗಿದ್ದ ಗೊಂದಲಕ್ಕೆ ಈಗ ಅಧಿಕೃತ ತೆರೆ ಬಿದ್ದಿದೆ. ನಾಳೆ ತೃತೀಯ ಭಾಷೆಯ ಅಂಕಗಳನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಅಂಕಗಳ ನಿರೀಕ್ಷೆಯಲ್ಲಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರ ಆತಂಕ ದೂರವಾದಂತಾಗಿದೆ.

ಇನ್ನೂ ಇತ್ತೀಚೆಗಷ್ಟೇ ಹೈಕೋರ್ಟ್ ತೃತೀಯ ಭಾಷೆಯ ಅಂಕಗಳನ್ನು ಪ್ರಕಟಿಸಿ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಈ ಬೆನ್ನಲ್ಲೇ ಕೋರ್ಟ್ ಆದೇಶಕ್ಕೆ ತಲೆಬಾಗಿದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವರು, ಮೌಲ್ಯಮಾಪನ ಕಾರ್ಯವು ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು, ಅಂಕಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು. ನಾಳೆ ಮಧ್ಯಾಹ್ನದೊಳಗೆ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಮೂಲಕ ಅಥವಾ ಆಯಾ ಶಾಲಾ ಲಾಗಿನ್ ಬಳಸಿ ನಾಳೆ ಅಂಕಗಳನ್ನು ಪರಿಶೀಲಿಸಬಹುದಾಗಿದೆ. ಫಲಿತಾಂಶದ ವಿಳಂಬದಿಂದ ವಿದ್ಯಾರ್ಥಿಗಳ ಮುಂದಿನ ವ್ಯಾಸಂಗಕ್ಕೆ ಯಾವುದೇ ತೊಂದರೆಯಾಗದಂತೆ ಇಲಾಖೆ ಎಚ್ಚರಿಕೆ ವಹಿಸಿದೆ ಎಂದು ಭರವಸೆ ನೀಡಿದ ಮಧು ಬಂಗಾರಪ್ಪ, ಪಾರದರ್ಶಕವಾಗಿ ಅಂಕಗಳನ್ನು ಪ್ರಕಟಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555