May 30, 2026
WhatsApp Image 2026-05-29 at 2.49.22 PM

ಸಿದ್ದರಾಮಯ್ಯ ಅವರು ತಮ್ಮ ಜೀವನದ ಆರಂಭದಿಂದಲೇ ಸಮಾನತೆ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ್ದಾರೆ.

ನವದೆಹಲಿ/ಬೆಂಗಳೂರು: 

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನವನ್ನು ಶುಕ್ರವಾರ ಶ್ಲಾಘಿಸಿದ್ದಾರೆ.

•  ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಅವರು, ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನ ಸದಾ ಗೌರವ, ಕರುಣೆ ಮತ್ತು ಸಾಮಾಜಿಕ ನ್ಯಾಯದ ಬದ್ಧತೆಯನ್ನು ಪ್ರತಿಬಿಂಬಿಸಿದೆ ಎಂದು ಹೇಳಿದ್ದಾರೆ.

•  ಸಿದ್ದರಾಮಯ್ಯ ಅವರು ತಮ್ಮ ಜೀವನದ ಆರಂಭದಿಂದಲೇ ಸಮಾನತೆ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ್ದಾರ

• ಸರಳ ಹಿನ್ನೆಲೆಯಿಂದ ಬಂದ ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡು ಬಾರಿ ಸೇವೆ ಸಲ್ಲಿಸಿದ್ದು, ತಮ್ಮ ಆಡಳಿತಾವಧಿಯಲ್ಲಿ ಸಮಾನತೆ, ಸೌಹಾರ್ದತೆ ಹಾಗೂ ಹಿಂದುಳಿದವರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು ಎಂದು ತಿಳಿಸಿದ್ದಾರೆ.

•  ಕರ್ನಾಟಕ ಹಾಗೂ ಕಾಂಗ್ರೆಸ್ ಪಕ್ಷವು ಅವರ ಸಾರ್ವಜನಿಕ ಸೇವೆಗೆ ಸದಾ ಕೃತಜ್ಞವಾಗಿದೆ. ಸಿದ್ದರಾಮಯ್ಯ ಅವರಿಗೆ ಉತ್ತಮ ಆರೋಗ್ಯ ಹಾಗೂ ಜನಸೇವೆಯಲ್ಲಿ ಮುಂದುವರಿದ ಯಶಸ್ಸು ದೊರೆಯಲಿ ಎಂದು ಹಾರೈಸಿದ್ದಾರೆ.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555