ಪ್ರಧಾನಿ ನರೇಂದ್ರ ಮೋದಿ ಅವರು ದೀರ್ಘಕಾಲದವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಅವರನ್ನು ಶ್ಲಾಘಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಇಂದು ಅಂಗೀಕರಿಸಿತು.
ನವದೆಹಲಿ:
• ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆಡಳಿತ ಅವಧಿಯ ದಾಖಲೆಯನ್ನು ಮುರಿಯುವ ಮೂವಲ ಪ್ರಧಾನಿ ನರೇಂದ್ರ ಮೋದಿ ಅವರು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಭಾರತದ ಅತಿ ಹೆಚ್ಚು ಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
• ಇದು ಭಾರತೀಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಕ್ಷಣವಾಗಿದ್ದು, ಜವಾಹರಲಾಲ್ ನೆಹರು ಅವರ ದೀರ್ಘಾವಧಿ ಪ್ರಧಾನಿ ದಾಖಲೆಯನ್ನು ಮುರಿದ ಪ್ರಧಾನಿ ಮೋದಿಗೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಭಿನಂದನಾ ನಿರ್ಣಯ ಅಂಗೀಕರಿಸಿದ್ದು, ಸಂಪುಟ ಸಹೋದ್ಯೋಗಿಗಳು ಎದ್ದುನಿಂತು ಚಪ್ಪಾಳೆ ಹೊಡೆಯುವ ಮೂಲಕ ಅಭಿನಂದಿಸಿದರು.
• ಪ್ರಧಾನಿ ನರೇಂದ್ರ ಮೋದಿ ಅವರು ದೀರ್ಘಕಾಲದವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಅವರನ್ನು ಶ್ಲಾಘಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಇಂದು ಅಂಗೀಕರಿಸಿತು.
• 2014ರಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡಾಗ ದೇಶದಲ್ಲಿದ್ದ ವಿಮಾನ ನಿಲ್ದಾಣಗಳ ಸಂಖ್ಯೆ 74. ಈಗ ಅದು 164ಕ್ಕೆ ಏರಿಕೆಯಾಗಿದೆ. 51, 348 ಎಂಬಿಬಿಎಸ್ ಸೀಟುಗಳು ಈಗ 1.28 ಲಕ್ಷ ಆಗಿದೆ. 13 IIM ಗಳು ಈಗ 21ಕ್ಕೆ ಏರಿಕೆಯಾಗಿವೆ. 304 ಶತಕೋಟಿ ಡಾಲರ್ ನಷ್ಟಿದ್ದ ವಿದೇಶಿ ವಿನಿಮಯ 680 ಶತಕೋಟಿ ಡಾಲರ್ ಗೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದೆ.
