ಕುಡಚಿ
ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು.
ರಾಯಬಾಗ ತಾಲೂಕಿನ ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಟ್ಟಟ್ಟಿ ಗ್ರಾಮದ ಸಮೀಪ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದಾನೆ.
ನಿಲಜಿ ಗ್ರಾಮದ ಅಮೋಲ್ ಮಾರುತಿ ಮೋರೆ (40) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ ಸುಮಾರು 1.30ರ ಸುಮಾರಿಗೆ ಸುಟ್ಟಟ್ಟಿ ಕ್ರಾಸ್ ಕಡೆಯಿಂದ ಸುಟ್ಟಟ್ಟಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಶ್ರೀ ಅಡವಿ ಲಕ್ಷ್ಮೀದೇವಿ ಗುಡಿಯ ಸಮೀಪದ ರಸ್ತೆಯ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ತೆಗ್ಗಿನಲ್ಲಿ ಬಿದ್ದಿದೆ. ಪರಿಣಾಮವಾಗಿ ಅಮೋಲ್ ಮೋರೆ ಅವರಿಗೆ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್‌ನ ಹಿಂಬದಿ ಸವಾರ ಅನೀಲ ಭಾಸ್ಕರ ಕಾಂಬಳೆ ಅವರಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ
