July 17, 2026
WhatsApp Image 2026-06-27 at 4.05.28 PM

1. ಬೆಳಗಾವಿ ಜಿಲ್ಲಾದ್ಯಂತ ಬೃಹತ್ ಮಾದಕ ವಿರೋಧಿ ಅಭಿಯಾನ
2. ಸಾವಿರಾರು ವಿದ್ಯಾರ್ಥಿಗಳಿಂದ ಡ್ರಗ್ಸ್ ಮುಕ್ತ ಸಮಾಜದ ಪ್ರತಿಜ್ಞೆ
3. ಯುವ ಪೀಳಿಗೆಯ ರಕ್ಷಣೆಗೆ ಪೊಲೀಸರಿಂದ ವಿಶೇಷ ಜಾಗೃತಿ
4. ಅಕ್ರಮ ಡ್ರಗ್ಸ್ ಮಾರಾಟಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ

•   ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆಯು ಜಿಲ್ಲಾದ್ಯಂತ ಬೃಹತ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದೆ. ಯುವ ಪೀಳಿಗೆಯನ್ನು ಮಾದಕ ವ್ಯಸನದಿಂದ ರಕ್ಷಿಸಲು ಹಮ್ಮಿಕೊಳ್ಳಲಾಗಿದ್ದ ಈ ವಿಶೇಷ ಸಪ್ತಾಹ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

•   ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಜೂನ್ 22 ರಿಂದ ಜೂನ್ 26 ರವರೆಗೆ ಜಿಲ್ಲೆಯ ವಿವಿಧ ಉಪ-ವಿಭಾಗಗಳಾದ ಬೈಲಹೊಂಗಲ, ರಾಮದುರ್ಗ, ಗೋಕಾಕ, ಚಿಕ್ಕೋಡಿ ಮತ್ತು ಅಥಣಿ ವ್ಯಾಪ್ತಿಯಲ್ಲಿ ಬೃಹತ್ ಜಾಥಾ ಹಾಗೂ ಜಾಗೃತಿ ಸಭೆಗಳನ್ನು ಆಯೋಜಿಸಲಾಗಿತ್ತು. ಈ ಅಭಿಯಾನದಲ್ಲಿ ಜಿಲ್ಲೆಯ ಪ್ರಮುಖ ಶಾಲೆ-ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಹಾಗೂ ಪೊಲೀಸ್ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಿ, ಮಾದಕ ದ್ರವ್ಯ ವಿರೋಧಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಗೋಕಾಕ ಮತ್ತು ಚಿಕ್ಕೋಡಿಯಲ್ಲಿ ನಡೆದ ಬೃಹತ್ ರ‍್ಯಾಲಿಯಲ್ಲಿ  500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದರು.

•   ಮಾದಕ ದ್ರವ್ಯಗಳು ಕೇವಲ ವ್ಯಕ್ತಿಯ ಆರೋಗ್ಯವನ್ನಷ್ಟೇ ಅಲ್ಲದೆ, ಇಡೀ ಕುಟುಂಬ ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವುತ್ತವೆ ಎಂದು ಪೊಲೀಸ್ ಇಲಾಖೆ ಮುಖ್ಯ ಸಂದೇಶ ನೀಡಿದೆ. ಜಿಲ್ಲೆಯನ್ನು “ಡ್ರಗ್ಸ್ ಮುಕ್ತ ಜಿಲ್ಲೆ”ಯನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸಬೇಕು ಹಾಗೂ ಎಲ್ಲಾದರೂ ಅಕ್ರಮ ಮಾದಕ ದ್ರವ್ಯ ಮಾರಾಟ ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಮಾಹಿತಿ ನೀಡಿದವರ ವಿವರಗಳನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555