ಪ್ರತಿ ವರ್ಷದಂತೆ ಈ ವರ್ಷವೂ ಸಹ ಕಿತ್ತೂರು ಉತ್ಸವದ ಅಂಗವಾಗಿ ಆಗಮಿಸಿದ ‘ಕಿತ್ತೂರು ಉತ್ಸವ ಜ್ಯೋತಿ’ಯನ್ನು ವಿವಿಧ ಸರ್ಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಅತ್ಯಂತ ವಿಜೃಂಭಣೆ ಮತ್ತು ಸಡಗರದಿಂದ ಆತ್ಮೀಯವಾಗಿ ಬರಮಾಡಿಕೊಂಡರು.
ಉತ್ಸವ ಜ್ಯೋತಿಯನ್ನು ಸ್ವಾಗತಿಸುವ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸರಕಾರಿ ಅಧಿಕಾರಿಗಳೊಂದಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿ ಮೆರುಗು ತಂದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆಯ ತಾಲೂಕ ಅಧ್ಯಕ್ಷರಾದ ಅನಿಲ ಜೆ. ಶೆಟ್ಟಿ, ಶ್ರೀರಾಮ್ ಸೇನಾ ಜಿಲ್ಲಾಧ್ಯಕ್ಷರಾದ ಶಿವಾನಂದ್ ಬಂತೆ, ಯುವ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾದ ಅನಿಲ ಕೊರವಿ, ಮತ್ತು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾದ ರಾಕೇಶ ಅವಳೆ ಉಪಸ್ಥಿತರಿದ್ದರು.
ಅಷ್ಟೇ ಅಲ್ಲದೆ, ಪ್ರಮುಖ ಮುಖಂಡರಾದ ಯಲ್ಲಪ್ಪ ಶಮನೇವಾಡಿ, ಭೀಮು ಚೌಗಲಾ, ಭೈರು ಮಾನಕಾಪುರ, ರಾಜು ಹೆಳವಿ, ಸಿದ್ದಾರ್ಥ್ ಬಂತೆ, ಮಣಿಕಂಠ ನಾವಿ ಸೇರಿದಂತೆ ಹಲವಾರು ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
